ಮಣಿಪುರದಲ್ಲಿ ನಡೆಯುತ್ತಿರುವ ಕ್ರೈಸ್ತ ಸಮುದಾಯದ ಮೇಲಿನ ದಾಳಿ ವಿರುದ್ದ ಬೀದಿಗಿಳಿದು ಹೋರಾಟ ನಡೆಸಬೇಕಾಗಿದೆ – ಇಲ್ಯಾಸ್ ತುಂಬೆ
ಮಂಗಳೂರು:ಮಣಿಪುರದಲ್ಲಿ ಕ್ರೈಸ್ತ ಸಮುದಾಯದ ಮೇಲೆ ದಾಳಿ, ದೌರ್ಜನ್ಯ ಮುಂದುವರಿದಿದ್ದು ಅನೇಕ ಮಂದಿಯನ್ನು ಈಗಾಗಲೇ ಹತ್ಯೆ ಮಾಡಲಾಗಿದ್ದು ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ, ಸಂಘ ಪರಿವಾರ, ಬಿಜೆಪಿಯ ಮುಖ್ಯ ಅಜೆಂಡಾ ಹಿಂದೂ, ಮುಸ್ಲಿಂ, ಕ್ರೈಸ್ತರ ಮಧ್ಯೆ ಕಚ್ಚಾಟ ನಡೆಸುವುದಾಗಿದೆ. ಇದರ ವಿರುದ್ಧ ದೇಶದ ಜನತೆ ಎಚ್ಚೆತ್ತುಕೊಳ್ಳದೇ ಹೋದರೆ ಮುಂದಕ್ಕೆ ಗಂಡಾಂತರ ಎದುರಾಗಲಿದೆ ಎಂದು ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ಹೇಳಿದ್ದಾರೆ.
ಆ.4ರಂದು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಮಣಿಪುರದಲ್ಲಿ ನಡೆದ ಘಟನೆ ನಮಗೆಲ್ಲಾ ಪಾಠವಾಗಿದ್ದು ನಾಗರಿಕ ಸಮಾಜ ಇನ್ನೂ ಬೀದಿಗಿಳಿದು ಇದರ ವಿರುದ್ಧ ಪ್ರತಿಭಟಿಸದೇ ಹೋದಲ್ಲಿ ಇಂತಹ ಕೃತ್ಯಗಳು ಇನ್ನಷ್ಟು ಹೆಚ್ಚಾಗಲಿದೆ ಎಂದು ಅವರು ಹೇಳಿದರು.
ಪ್ರತಿಭಟನೆಯಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.