ಗದ್ದೆಗೆ ಬಿದ್ದ ಬಸ್: ಹಲವರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕದ ಗದ್ದೆಗೆ ಉರುಳಿದ ಘಟನೆ ಶಿರಸಿ ತಾಲೂಕಿನ ಹನುಮಂತಿ ಬಳಿ ಆ .4ರಂದು ಮಧ್ಯರಾತ್ರಿ ಸುಮಾರು ಮೂರು ಗಂಟೆ ಸಮಯಕ್ಕೆ ಸಂಭವಿಸಿದೆ.
ಮಂಗಳೂರಿನಿಂದ ಕುಷ್ಟಗಿಗೆ ಹೊರಟಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಗಾಯಗಳುಗಳನ್ನು ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಬಸ್ ಗದ್ದೆಗೆ ಉರುಳಿ ಬಿದ್ದ ಪರಿಣಾಮ ಬಸ್ ಚಾಲಕ ಸೇರಿದಂತೆ ಹಲವರಿಗೆ ಗಂಭೀರ ಗಾಯಗಳಾಗಿದೆ.