ಬೆಂಗಳೂರಿನಲ್ಲಿ ನಡೆಯಲಿದೆ ಕಂಬಳ: ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವ
ರಾಜ್ಯದಲ್ಲಿ ಹೆಸರು ಪಡೆದಿರುವ ಜಾನಪದ ಕ್ರೀಡೆಗಳಲ್ಲಿ ಒಂದಾಗಿರುವ ‘ಕಂಬಳ’ನವೆಂಬರ್ ತಿಂಗಳಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಪೂರಕ ಸಿದ್ಧತೆಗಳು ನಡೆಯುತ್ತಿವೆ.
ಅರಮನೆ ಮೈದಾನದಲ್ಲಿ ಆಯೋಜನೆಗೆ ಮೈಸೂರು ರಾಜಮನೆತನದ ಅನುಮತಿಯೂ ಲಭಿಸಿದೆ ಎನ್ನಲಾಗಿದೆ. ರಾಜ್ಯ ರಾಜಧಾನಿ ಯಲ್ಲಿ ಬೆಂಗಳೂರು ತುಳುಕೂಟದ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ಕಂಬಳ ಆಯೋಜನೆಗೆ ನಿರ್ಧರಿಸಲಾಗಿದೆ.