ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಮರುಸ್ಥಾಪನೆ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತೆ ಸಂಸತ್ ಪ್ರವೇಶ ಮಾಡಲಿದ್ದಾರೆ. ಮೋದಿ ಉಪನಾಮ ಟೀಕೆ ಪ್ರಕರಣಕ್ಕೆ ಸಂಬಂಧಿಸಿ ಸೂರತ್ ನ್ಯಾಯಾಲಯವು ಕಾಂಗ್ರೆಸ್ ಮುಖಂಡ ರಾಹುಲ್‌ಗಾಂಧಿ ಅವರಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರಿಂಕೋರ್ಟ್ ತಡೆಯಾಜ್ಞೆ ವಿಧಿಸಿದ ಬೆನ್ನಲ್ಲೇ, ರಾಹುಲ್ ಗಾಂಧಿಯವರ ಸಂಸತ್ ಸದಸ್ಯತ್ವವನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪುನಃಸ್ಥಾಪಿಸಿದ್ದಾರೆ.

ಸುಪ್ರೀಂ ಆದೇಶ ಬೆನ್ನಲ್ಲೇ ಲೋಕಸಭೆಯ ಸ್ಪೀಕರ್ ಸದಸ್ಯತ್ವವನ್ನ ಮರಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಲೋಕಸಭೆ ಅಧಿವೇಶನದಲ್ಲಿ ಭಾಗವಹಿಸಬಹುದಾಗಿದೆ.