ಆ.15 ನಂತರ ಪ್ರತಿಪಕ್ಷದ ನಾಯಕನ ಆಯ್ಕೆ- ಬೊಮ್ಮಾಯಿ
ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಸಂಸತ್ ಅಧಿವೇಶನ ಸಂದರ್ಭದಲ್ಲಿ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ. ಅದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ, ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಮಾಡಿದ್ದೇನೆ ಎಂದರು.