ಕರಾವಳಿ

ಪಂಚೋಡಿ-ಕರ್ನೂರು-ಗಾಳಿಮುಖ ರಸ್ತೆಗೆ 3.72 ಕೋಟಿ ಅನುದಾನ:
15 ವರ್ಷಗಳ ಬೇಡಿಕೆ ಈ ಬಾರಿ ಈಡೇರಿದೆ: ಶಾಸಕ ಅಶೋಕ್ ರೈ
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಪಂಚೋಡಿ-ಕರ್ನೂರು-ಗಾಳಿಮುಖ ರಸ್ತೆಗೆ ರೂ. 3.72 ಕೋಟಿ ಅನುದಾನವನ್ನು ಸರಕಾರ ಮಂಜೂರು ಮಾಡಿದ್ದು ಸುಮಾರು 15 ವರ್ಷಗಳ ಬೇಡಿಕೆ ಈ ಬಾರಿ ಈಡೇರಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.


ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಈ ರಸ್ತೆಯು ಕೇರಳವನ್ನು ಸಂಪರ್ಕಿಸುವ ರಸ್ತೆಯಾಗಿದ್ದು 15 ವರ್ಷಗಳಿಂದ ದುರಸ್ಥಿಯಾಗಿರಲಿಲ್ಲ. ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದು ವಾಹನ ಸಂಚಾರಕ್ಕೂ ತೊಂದರೆಯಾಗುತ್ತಿತ್ತು. ರಸ್ತೆ ದುರಸ್ಥಿ ಮಾಡುವಂತೆ ಗ್ರಾಮಸ್ಥರು ಹಲವು ಬಾರಿ ಪ್ರತಿಭಟನೆಯನ್ನು ಮಾಡಿದ್ದರು. ಸುಮಾರು 5 ಕಿ ಮೀ ವ್ಯಾಪ್ತಿಯ ಈ ರಸ್ತೆಯಲ್ಲಿ ಬಸ್ ಸಂಚಾರವೂ ಇದೆ. ರಸ್ತೆ ದುರಸ್ಥಿಗಾಗಿ 3 ಕೋಟಿ 72 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಪ್ರಾರಂಭಗೊಂಡಿದ್ದು ಕಾಮಗಾರಿಯನ್ನು ಶಾಸಕರು ವೀಕ್ಷಣೆ ಮಾಡಿದರು.

ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲ, ಕಾಮಗಾರಿ ವೇಳೆ ಗ್ರಾಮಸ್ಥರು ಗುಣಮಟ್ಟದ ಬಗ್ಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಿದರು.
ಕಾಂಗ್ರೆಸ್ ಮುಖಂಡ ಶ್ರೀರಾಂ ಪಕ್ಕಳ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!