ಸುಳ್ಯ :ಅನ್ಯಕೋಮಿನ ಯುವತಿಯನ್ನು ವಾಹನದಲ್ಲಿ ಕರೆದೊಯ್ದ ಆರೋಪ: ವಾಹನ ಅಡ್ಡಗಟ್ಟಿ ಯುವಕರಿಂದ ಹಲ್ಲೆ, ಪ್ರಕರಣ ದಾಖಲು
ಸುಳ್ಯ: ಅನ್ಯಕೋಮಿನ ಯುವತಿಯನ್ನು ಕಾರಲ್ಲಿ ಕರೆದೊಯ್ಯುತ್ತಿದ್ದನೆಂಬ ಕಾರಣಕ್ಕಾಗಿ ಕಾರಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕೆಲ ಯುವಕರು ತಡೆದು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ವರದಿಯಾಗಿದ್ದು, ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
ಸುಳ್ಯ ತಾಲೂಕಿನ ಅರಂತೋಡು ಕಡೆ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಅನ್ಯಕೋಮಿನ ಯುವತಿಯೊಬ್ಬಳನ್ನು ತನ್ನ ಕಾರಲ್ಲಿ ಸುತ್ತಾಡಿಸುತ್ತಿದ್ದಾನೆಂದು ಕೆಲವು ಯುವಕರು ಅನುಮಾನದಿಂದ ಹಿಂಬಾಲಿಸುತ್ತಿದ್ದರೆನ್ನಲಾಗಿದೆ.
ಇಂದು ಸಂಜೆ ಆತ ಯುವತಿಯನ್ನು ಸುಳ್ಯಕ್ಕೆ ಬಿಟ್ಟು ತೊಡಿಕಾನ ಕಡೆಗೆ ಬರುತ್ತಿದ್ದಾನೆಂಬ ಮಾಹಿತಿ ದೊರೆತ ಸಂಘಟನೆಯ ಕೆಲವು ಯುವಕರು ಕಾರನ್ನು ಅಡ್ಡಗಟ್ಟಿ ತಡೆದು ನಿಲ್ಲಿಸಿದರೆಂದೂ, ಸುಳ್ಯದಿಂದ ಬಂದ ಸಂಘಟನೆಯ ಇಬ್ಬರು ಯುವಕರು ಆ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದರೆಂದೂ ತಿಳಿದು ಬಂದಿದೆ.
ಹಲ್ಲೆಯಿಂದ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿ ದೂರು ನೀಡಿದ್ದು ಪೋಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.