ಸೌಜನ್ಯ ಪ್ರಕರಣ: ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ- ಸಮಾನ ಮನಸ್ಕರ ಹೋರಾಟ ಸಮಿತಿಯಿಂದ ಕಾಣಿಯೂರಿನಲ್ಲಿ ಮೌನ ಮೆರವಣಿಗೆ, ಪ್ರತಿಭಟನೆ
ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕಾಣಿಯೂರು, ಚಾರ್ವಾಕ, ದೋಳ್ಪಾಡಿ ಮತ್ತು ಪುಣ್ಚತ್ತಾರು ಇದರ ವತಿಯಿಂದ ಆ.12ರಂದು ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ನ್ಯಾಯಕ್ಕಾಗಿ ಪ್ರಾರ್ಥನೆ ಮಾಡಿ ಕಾಣಿಯೂರು ಬಸ್ ನಿಲ್ದಾಣದ ಬಳಿ ಶಾಂತಿಯುತ ಮೌನ ಪ್ರತಿಭಟನೆ ನಡೆಯಿತು.

ಸಭೆಯನ್ನುದ್ದೇಶಿಸಿ ಪ್ರಮುಖರು ಮಾತನಾಡಿದರು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು .