ಕರಾವಳಿ

ಸುಳ್ಯ ಅರಂತೋಡಿನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಖಂಡನೀಯ: ನ.ಪಂ ಸದಸ್ಯ ಕೆ ಎಸ್ ಉಮ್ಮರ್



ಆ.12ರಂದು ಅರಂತೋಡಿನಲ್ಲಿ ಕೇರಳದ ಜಲೀಲ್ ಎಂಬ ವ್ಯಕ್ತಿಯ ಮೇಲೆ ನಡೆದ ಅನೈತಿಕ ಪೊಲೀಸ್ ಗಿರಿ ಖಂಡನೀಯ ಎಂದು ಸುಳ್ಯ ನಗರ ಪಂಚಾಯತ್ ಸದಸ್ಯ ಕೆ ಎಸ್ ಉಮ್ಮರ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಈ ರೀತಿಯ ಘಟನೆಗಳು ಜಿಲ್ಲೆಯ ಶಾಂತಿಯನ್ನು ಕೆಡಿಸುವ ತಂತ್ರವಾಗಿದ್ದು,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಇಂಥ ಘಟನೆಗಳು ನಿರಂತರವಾಗಿ ನಡೆಯುತ್ತಿದೆ.
ಇಂತಹ ಕ್ರಿಮಿನಲ್ ವ್ಯಕ್ತಿಗಳ ಮೇಲೆ ಜಿಲ್ಲಾಡಳಿತ ಗೂಂಡಾ ಎಕ್ಟ್ ಪ್ರಕಾರ ಕೇಸ್ ದಾಖಲಿಸಿ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.


ಅರಂತೋಡಿನಲ್ಲಿ ಜಲೀಲ್ ಎಂಬರಿಗೆ ಹಲ್ಲೆ ನಡೆಸಿದ ಎಲ್ಲಾ ವ್ಯಕ್ತಿಗಳ ಮೇಲೆ ಪೊಲೀಸ್ ಅಧಿಕಾರಿಗಳು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಶಾಂತಿ, ಸೌಹಾರ್ದತೆಯಿಂದ ಬದುಕುವ ಸುಳ್ಯದ ವಾತಾವರಣವನ್ನು ಕಾಪಾಡಿಕೊಳ್ಳಬೇಕೆಂದು ಪತ್ರಿಕಾ ಪ್ರಕಟಣೆ ಮೂಲಕ ಅವರು ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!