ಪುತ್ತೂರು: ಸೌಜನ್ಯ ಪ್ರಕರಣ ಮರುತನಿಖೆಗೆ ಒತ್ತಾಯಿಸಿ ಪುತ್ತಿಲ ಪರಿವಾರದಿಂದ ಬೃಹತ್ ಕಾಲ್ನಡಿಗೆ ಜಾಥಾ
ಪುತ್ತೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವನ್ನು ಸರಕಾರ ಮರುತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಆ.14ರಂದು ಪುತ್ತಿಲ ಪರಿವಾರದ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನಾ ಪಾದಯಾತ್ರೆಗೆ ಚಾಲನೆ ನೀಡಲಾಯಿತು.
ದರ್ಬೆ ವೃತ್ತದಲ್ಲಿ ತೆಂಗಿನ ಕಾಯಿ ಒಡೆಯುವ ಮೂಲಕ ಪಾದಯಾತ್ರೆಗೆ ಚಾಲನೆ ದೊರೆತಿದ್ದು ಪ್ರತಿಭಟನಾಕಾರರು ಪಾದಯಾತ್ರೆಯ ಮೂಲಕ ದರ್ಬೆ ಸರ್ಕಲ್ ಬಳಿಯಿಂದ ನಗರದ ಬಸ್‌ನಿಲ್ದಾಣದವರೆಗೆ ಸೌಜನ್ಯ ಪರ ಘೋಷಣೆಗಳನ್ನು ಕೂಗಿ ನ್ಯಾಯಕ್ಕೆ ಆಗ್ರಹಿಸುತ್ತಾ ಸಾಗಿ ಬಂದಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ನೂರಾರು ಮಂದಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ