ಕರಾವಳಿ

ಸುಳ್ಯ: ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಮೃತ್ಯುಸುಳ್ಯ ಶಾಂತಿನಗರ ನಿವಾಸಿ 17 ವರ್ಷದ ಬಾಲಕ ಹೊಟ್ಟೆ ನೋವು ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಸುಳ್ಯ ಶಾಂತಿನಗರ ನಿವಾಸಿ ಸಂಜೀವ ಎಂಬುವರ ಪುತ್ರ ಶ್ರೀಜಿತ್ ಮೃತ ಬಾಲಕ . ಈತನಿಗೆ ಕಳೆದ ಎರಡು ದಿನಗಳಿಂದ ಹೊಟ್ಟೆ ನೋವು ಕಾಣಿಸಿದ್ದು ಆಗಸ್ಟ್ 13ರಂದು ನೋವು ಉಲ್ಬಣಗೊಂಡು ಮನೆಯವರು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ತಂದಿದ್ದರು. ಬಳಿಕ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಿದ್ದು ಬಾಲಕನಿಗೆ ಕೂಡಲೇ ಶಸ್ತ್ರಚಿಕಿತ್ಸೆ ನಡೆಸಬೇಕೆಂದು ವೈದ್ಯರು ಹೇಳಿದಾಗ ಆತನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಮನೆಯವರು ಕೊಂಡೊಯ್ದರು.


ಅಲ್ಲಿ ನಿನ್ನೆ ಸಂಜೆ ಶಸ್ತ್ರ ಚಿಕಿತ್ಸೆ ನಡೆದಿದ್ದು ಬಳಿಕ ಬಾಲಕನ ಸ್ಥಿತಿ ಗಂಭೀರವಾದಾಗ ಮಂಗಳೂರು ಕೆ ಎಂ ಸಿ ಆಸ್ಪತ್ರೆಗೆ ಕೊಂಡಯ್ಯುವಂತೆ ಅಲ್ಲಿಯ ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ.ಇಂದು ಬೆಳಿಗ್ಗೆ ಆತನನ್ನು ಮಂಗಳೂರು ಕೆ ಎಂ ಸಿ ಆಸ್ಪತ್ರೆಗೆ ದಾಖಲಾಗಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತ ಬಾಲಕ ತಾಯಿ ಪ್ರೇಮ, ಸಹೋದರ ಶ್ರೀನಿತ್ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಇದೀಗ ಬಾಲಕನ ಸಾವಿಗೆ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರು ಕಾರಣವೆಂದು ಬಾಲಕನ ಪೋಷಕರು ಮತ್ತು ಕುಟುಂಬಸ್ಥರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!