ಸುಳ್ಯ ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಸೇವೆಯಲ್ಲಿ ಕರ್ತವ್ಯ ನಿಷ್ಠೆ ಮತ್ತು ಒಗ್ಗಟ್ಟಿನ ಶಕ್ತಿ ಇರಲಿ: ನವೀನ್ ಚಂದ್ರಜೋಗಿ
ಸುಳ್ಯ ಪೊಲೀಸ್ ಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಅವರು ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳನ್ನು ನೀಡಿ ಮಾತನಾಡಿ ನಾವೆಲ್ಲರೂ ನಮ್ಮೆಲ್ಲರ ಕರ್ತವ್ಯವನ್ನು ನಿಷ್ಠೆ ಮತ್ತು ಒಗ್ಗಟ್ಟಿನಿಂದ ಮಾಡಬೇಕಾಗಿದೆ.
ಪೊಲೀಸ್ ಇಲಾಖೆಯಲ್ಲಿ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಯು ಅಧಿಕಾರಿಗಳೊಂದಿಗೆ ಕೈಜೋಡಿಸಿ ತಮ್ಮ ತಮ್ಮ ಕರ್ತವ್ಯಗಳನ್ನು ಪಾಲಿಸಿದರೆ ಎಷ್ಟೇ ದೊಡ್ಡ ಪ್ರಕರಣಗಳನ್ನು ಭೇದಿಸಲು ಸಾಧ್ಯವಾಗುತ್ತದೆ. ನಮ್ಮ ಕರ್ತವ್ಯದಲ್ಲಿ ಅಪರಾಧ ಮುಕ್ತ ಸಮಾಜದ ನಿರ್ಮಾಣವೇ ಮುಖ್ಯ ಗುರಿಯಾಗಿರಬೇಕೆಂದು ಹೇಳಿದರು.
ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರ್ ನೇತೃತ್ವವನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ ಪೊಲೀಸ್ ಠಾಣಾ ತನಿಖಾ ವಿಭಾಗದ ಉಪನಿರೀಕ್ಷಕರಾದ ಸರಸ್ವತಿ,ಎ ಎಸ್ ಐ ಗಳು, ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.