ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಪುತ್ತೂರು: ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಸಂಸ್ಥೆಯ ನಿರ್ದೇಶಕರಾದ ಬಾತಿಶಾ ಕನಕಮಜಲು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ನೀಡಿದರು.
ಸಂಸ್ಥೆಯ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ, ದೇಶಭಕ್ತಿ ಗೀತೆ ಹಾಗೂ ನೃತ್ಯಗಳನ್ನು ಮಾಡಿದರು.
ಸಂಸ್ಥೆಯ ನಿರ್ದೇಶಕ ಹಾಶಿಂ ಮೇನಾಲ, ಸಲಹಾ ಸಮಿತಿ ಸದಸ್ಯರಾದ ಅಬ್ದುಲ್ ರಹಿಮಾನ್ ಹಾಜಿ ಹಾಗೂ ಮುಖ್ಯ ಶಿಕ್ಷಕಿ ತಪಸ್ವಿನಿ.ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಸ್ಥೆಯ ಶಿಕ್ಷಕಿಯರಾದ ಲವೀನಾ ಕ್ರಸ್ತ ಕಾರ್ಯಕ್ರಮವನ್ನು ಸ್ವಾಗತಿಸಿ ಅಕ್ಷತಾ ವಂದಿಸಿದರು.
ಶಿಕ್ಷಕಿ ಮನೋದ ಕಾರ್ಯಕ್ರಮವನ್ನು ನಿರೂಪಿಸಿದರು.
ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ವಿವಿಧ ಕಾರ್ಯಕ್ರಮವನ್ನು ನಿರ್ವಹಿಸಿದರು.