ಕರಾವಳಿಕ್ರೈಂ

ರೋಗಿಯನ್ನು ತುರ್ತಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಪಲ್ಟಿ- ಚಾಲಕ ಮೃತ್ಯು



ಬಂಟ್ವಾಳ: ರೋಗಿಯೋರ್ವರನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಆ್ಯಂಬುಲೆನ್ಸ್ ವಾಹನವೊಂದು‌ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿ ವಾಹನ ಚಾಲಕ ಗುರುವಾಯನಕೆರೆ ನಿವಾಸಿ ಶಬೀರ್ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಆ್ಯಂಬುಲೆನ್ಸ್ ವಾಹನ ವಗ್ಗ ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ ರಸ್ತೆ ಮಧ್ಯ ಭಾಗದಲ್ಲಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ರೋಗಿಯನ್ನು ಬದಲಿ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!