ಪುತ್ತೂರು: ಬಾವಿಗೆ ಬಿದ್ದು ಕಾಡುಕೋಣ ಮೃತ್ಯು: ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ
ಪುತ್ತೂರು: ಕಾಡುಕೋಣವೊಂದು ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಆ.19ರಂದು ನರಿಮೊಗರುವಿನಲ್ಲಿ ನಡೆದಿದೆ.

ಪ್ರಕಾಶ್ ಎಂಬವರ ಜಾಗದಲ್ಲಿರುವ ಬಾವಿಯಲ್ಲಿ ಬೆಳಗ್ಗಿನ ಹೊತ್ತು ಕಾಡುಕೋಣವೊಂದು ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಕಂಡು ಬಂದಿದೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯವರು ಕ್ರೇನ್ ಮುಖಾಂತರ ಕಾಡುಕೋಣವನ್ನು ಬಾವಿಯಿಂದ ಮೇಲಕೆತ್ತಿದ್ದಾರೆ.

ಎಸಿಎಫ್ ಸುಬ್ಬಯ್ಯ ನಾಯ್ಕ, ಆರ್‌ಎಫ್ ಕಿರಣ್, ಡಿವೈಆರ್ ಎಫ್ ಕುಮಾರಸ್ವಾಮಿ ಹಾಗೂ ಪ್ರಸಾದ್ ಕೆ.ಜೆ, ಬೀಟ್ ಫಾರೆಸ್ಟ್ ಸತ್ಯನ್ ಡಿ.ಜಿ, ದೀಪಕ್, ಚಿದಾನಂದ, ಅರಣ್ಯ ವೀಕ್ಷಕ ಶೀನಪ್ಪ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.