ಸುಳ್ಯ: ಲೋಕಾಯುಕ್ತ ಬಲೆಗೆ ಬಿದ್ದ ಸಂಪಾಜೆ- ಅರಂತೋಡು ಗ್ರಾಮ ಆಡಳಿತಾಧಿಕಾರಿ
ಸುಳ್ಯ: ಲೋಕಾಯುಕ್ತ ಬಲೆಗೆ ಬಿದ್ದ ಸಂಪಾಜೆ- ಅರಂತೋಡು ಗ್ರಾಮ ಆಡಳಿತಾಧಿಕಾರಿ, ಭಾರಿ ದುಡ್ಡಿಗೆ ಬೇಡಿಕೆಇಟ್ಟು ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಕಚೇರಿಗೆ ದಾಳಿ ನಡೆಸಿ ಗ್ರಾಮ ಲೆಕ್ಕಾಧಿಕಾರಿಯನ್ನು ಬಂಧಿಸಿದ್ದಾರೆ.

ಅರಂತೋಡಿನ ವ್ಯಕ್ತಿಯೊಬ್ಬರು ಹಕ್ಕು ಖುಲಾಸೆಗಾಗಿ ಅರ್ಜಿ ಸ್ವೀಕರಿಸಿದ್ದರು. ಈ ವೇಳೆ ಕಡತ ವಿಲೇವಾರಿಗಾಗಿ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಮೊದಲಿಗೆ ಮೂರು ಸಾವಿರ ರೂಪಾಯಿಯನ್ನು ಪಡೆದಿದ್ದು ಉಳಿದ 5 ಸಾವಿರ ರೂಗಳನ್ನು ಇಂದು ತರುವಂತೆ ಸೂಚಿಸಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಗ್ರಾಮ ಆಡಳಿತಾಧಿಕಾರಿ ಮಿಯಾಸಾಬ್ ಮುಲ್ಲಾ ಇಂದು (ಶನಿವಾರ) ಹಣ ಸ್ವೀಕರಿಸುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ.
ಸುಳ್ಯ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಇದೀಗ ಗ್ರಾಮ ಲೆಕ್ಕಾಧಿಕಾರಿಯ ವಿಚಾರಣೆಯನ್ನು ನಡೆಸುತ್ತಿದ್ದು ಲೋಕಾಯುಕ್ತ ವಿಭಾಗದ ಎಸ್ಪಿ ಸೈಮನ್, ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ಸಿಬ್ಬಂದಿಗಳ ಜೊತೆ ದಾಳಿ ನಡೆಸಲಾಗಿದೆ.





