ಕರಾವಳಿ

ಅಲ್ಪ ಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರಿ ಸಂಘದ ಸಾಧನೆಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿಮಂಗಳೂರು: ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರಿ ಸಂಘ ಇದರ 2022- 23ನೇ ಸಾಲಿನ ಸಮಗ್ರ ಕಾರ್ಯ ಚಟುವಟಿಕೆಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ನೀಡಲ್ಪಡುವ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ: ಎಂ. ಎನ್. ರಾಜೇಂದ್ರ ಕುಮಾರ್ ರವರಿಂದ ಇಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಅಲ್ಪಸಂಖ್ಯಾತರ ಸಹಕಾರಿ ಸಂಘದ ಅಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಎಲಿಮಲೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್ ರವರು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರು ಹಾಲಿ ನಿರ್ದೇಶಕರಾದ ಸಂಶುದ್ದೀನ್ ಆರಂಬುರು, ಮಾಜಿ ಉಪಾಧ್ಯಕ್ಷರು ಹಾಲಿ ನಿರ್ದೇಶಕರಾದ ಎ.ಕೆ . ಹಸೈನಾರ್ ಕಲ್ಲುಗುಂಡಿ ,ನಿರ್ದೇಶಕರಾದ ಜೂಲಿಯಾನ ಕ್ರಾಸ್ಥ, ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!