ರಾಜಕೀಯರಾಜ್ಯ

ಆ.23ರಂದು ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ- ಯಡಿಯೂರಪ್ಪ ನೇತೃತ್ವ



ಗುತ್ತಿಗೆದಾರರ ಕಮಿಷನ್, ವರ್ಗಾವಣೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಸಿಎಂ ಬಸವರಾಜ  ಬೊಮ್ಮಾಯಿ ಹೇಳಿದ್ದಾರೆ.

ಸರ್ಕಾರ ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಕಾಂಗ್ರೆಸ್ನ ಪಂಚ ಯೋಜನೆಗಳು ಕೇವಲ ಹೆಸರಿಗೆ ಮಾತ್ರ. ಕೊಟ್ಟ ಭರವಸೆಯನ್ನು ಈಡೇರಿಸಲು ಅವರಿಂದ ಸ್ಯಾಧ್ಯವಾಗಿಲ್ಲ ಎಂದು ಹೇಳಿದರು.

ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ಬೇಸತ್ತು ಹೋಗಿದ್ದಾರೆ. ತಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯವನ್ನು ಆರ್ಥಿಕವಾಗಿ ಹಿಂದಕ್ಕೆ ಕೊಂಡೊಯ್ಯುತ್ತಿದ್ದಾರೆ ಎಂದು ಬೊಮ್ಮಾಯಿ ಕಿಡಿ ಕಾರಿದರು.

Leave a Reply

Your email address will not be published. Required fields are marked *

error: Content is protected !!