ಕರಾವಳಿ

ಬಂಟ್ವಾಳದಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ



ಬಂಟ್ವಾಳ: ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದ ಮಾತ್ರಕ್ಕೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದೇವೆ ಎಂದು ಹೇಳಲು ಸಾಧ್ಯವಿಲ್ಲ. ವಿದ್ಯಾರ್ಥಿ ವೇತನ ನೀಡುವುದರ ಜೊತೆಗೆ ವಿದ್ಯಾರ್ಥಿ ಸಮೂಹಕ್ಕೆ ಸರಿಯಾದ ಶೈಕ್ಷಣಿಕ ಮಾರ್ಗದರ್ಶನ, ತರಬೇತಿ, ಶಿಕ್ಷಣದ ಮೌಲ್ಯ, ಸ್ಪರ್ಧಾತ್ಮಕ ಪರೀಕ್ಷೆಗಳ ಅರಿವು, ಜೊತೆಗೆ ಸಾಮಾಜಿಕ ಕಳಕಳಿ ಬೆಳೆಸುವ ಪ್ರಯತ್ನ ಆಗಬೇಕಿದೆ ಎಂದು ಸೌದಿ ಅರೇಬಿಯಾ ಜುಬೈಲ್ ನ ಕೆ.ಎಂ.ಟಿ. ಇದರ ಸಿಇಒ ಅಬ್ದುಲ್ ರಝಾಕ್ ಹೇಳಿದರು.

ಬಂಟ್ವಾಳ ಕಮ್ಯೂನಿಟಿ ಸೆಂಟರ್ ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಕಮ್ಯೂನಿಟಿ ಸೆಂಟರ್ ನ್ನು ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ.ಬಾವಾ, ಹಿರಿಯ ಪತ್ರಕರ್ತ ಬಿ.ಎಂ.ಹನೀಫ್, ಸಿ.ಆರ್.ಡಿ.ಎಫ್ ಚೇರ್ ಮೆನ್ ಅಮ್ಜದ್ ಖಾನ್, ಶೈಕ್ಷಣಿಕ ತರಬೇತುದಾರ ರಫೀಕ್ ಮಾಸ್ಟರ್, ಡೈಮಂಡ್ ಇಂಟರ್ ನ್ಯಾಷನಲ್ ಸ್ಕೂಲ್ ನ ಟ್ರಸ್ಟಿ ಸಲೀಂ ಅಲ್ತಾಫ್ ಫರಂಗಿಪೇಟೆ, ಬರಕ ಕಾಲೇಜಿನ ಮೌಲಾನ ಹನೀಫ್, ಬಂಟ್ವಾಳ ಪುರಸಭಾ ಸದಸ್ಯ ಮುನೀಶ್ ಅಲಿ ಸಮಾಜಕ್ಕೆ ಅರ್ಪಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಕ್ಯಾರಿಯರ್ ಕೌನ್ಸಿಲಿಂಗ್, ಅವರ ಸಾಮರ್ಥ್ಯ ಪರೀಕ್ಷೆ, ವ್ಯಕ್ತಿತ್ವ ವಿಕಸ, ಕೌಶಲ್ಯ ಪೊಷಣೆ, ಸ್ಪರ್ಧಾತ್ಮಕ ಪರೀಕ್ಷೆಗೆ ನೆರವು, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಯೋಜನೆಗಳನ್ನು ಕಮ್ಯುನಿಟಿ ಸೆಂಟರ್ ಕಾರ್ಯರೂಪಕ್ಕೆ ತರಲಿದೆ

ಪತ್ರಕರ್ತ ಇಮ್ತಿಯಾಝ್ ಶಾ ತುಂಬೆ ಸ್ವಾಗತಿಸಿದರು. ಪುತ್ತೂರು ಕಮ್ಯೂನಿಟಿ ಸೆಂಟರ್ ನ ಸಂಚಾಲಕ ಹನೀಫ್ ಪುತ್ತೂರು ವಂದಿಸಿದರು. ಅಶ್ರಫ್ ತಲಪಾಡಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!