ಎಲಿಮಲೆ: ಆತ್ಮಹತ್ಯೆಗೆ ಶರಣಾದ ದಂಪತಿ
ಸುಳ್ಯ: ಎಲಿಮಲೆಯ ಮನೆಯಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ ವರ್ಷಗಳಿಂದ ಟ್ಯಾಪಿಂಗ್ ಮಾಡುತ್ತಿದ್ದ ತಮಿಳುನಾಡು ಮೂಲದ ರಾಜನ್ ಮತ್ತು ಅವರ ಪತ್ನಿ ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ.
ರಾಜನ್ ರವರು ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರು. ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು, ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.