ಕ್ರೈಂ

ಇನ್ ಸ್ಟಾಗ್ರಾಂ ಸ್ನೇಹಿತನಿಂದ ಯುವತಿಯ ಮೇಲೆ ಅತ್ಯಾಚಾರ ಆರೋಪ : ಅಶ್ಲೀಲ ಫೋಟೊ, ವಿಡಿಯೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗಪಡಿಸುವುದಾಗಿ ಬೆದರಿಕೆಇನ್ ಸ್ಟಾಗ್ರಾಂ ಸ್ನೇಹಿತನೊಬ್ಬ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು ಆಕೆಯ ಅಶ್ಲೀಲ ಫೋಟೊ ಹಾಗೂ ವಿಡಿಯೊಗಳನ್ನು ಚಿತ್ರೀಕರಿಸಿ ಬಳಿಕ ಅದನ್ನು ಸೋಶಿಯಲ್ ಮೀಡಿಯಾಗಳಲ್ಲಿ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿರುವ ಘಟನೆ ಗುರುಗಾಂವ್ ನಿಂದ ವರದಿಯಾಗಿದೆ.

ಮಹಿಳೆಗೆ ಸಾಮಾಜಿಕ ಜಾಲತಾಣ ವೇದಿಕೆಯಲ್ಲಿ ಆರೋಪಿ ರಾಹುಲ್ ಎಂಬಾತನ ಪರಿಚಯವಾಗಿತ್ತು. ಪರಸ್ಪರ ದೂರವಾಣಿ ಸಂಖ್ಯೆ ಹಂಚಿಕೊಂಡು ಮಾತುಕತೆ ಆರಂಭಿಸಿದರು. ಗುರುಗಾಂವ್ ನ ಸೆಕ್ಟರ್ 14ರ ಪೇಯಿಂಗ್ ಗೆಸ್ಟ್ ವ್ಯವಸ್ಥೆಯಲ್ಲಿ ವಾಸ ಮಾಡುವಂತೆ ರಾಹುಲ್ ಈಕೆಯ ಮನವೊಲಿಸಿದ್ದ ಎಂದು ಮಹಿಳೆ ನೀಡಿದ ದೂರಿನಲ್ಲಿ ವಿವರಿಸಲಾಗಿದೆ. “ಆಗಸ್ಟ್ 4ರಂದು ರಾಹುಲ್ ನನಗೆ ಕರೆ ಮಾಡಿ ಸೆಕ್ಟರ್ 12ರಲ್ಲಿ ಹೋಟೆಲ್ ಗೆ ಕರೆದೊಯ್ದ. ವಿವಾಹವಾಗುವ ಭರವಸೆ ನೀಡಿ ಅತ್ಯಾಚಾರ ಎಸಗಿದ. ಅಶ್ಲೀಲ ಫೋಟೊಗಳನ್ನು ಕ್ಲಿಕ್ಕಿಸಿದ್ದಲ್ಲದೇ ವಿಡಿಯೊವನ್ನು ಕೂಡಾ ಚಿತ್ರೀಕರಿಸಿಕೊಂಡಿದ್ದಾನೆ. ಇದನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ” ಎಂದು ದೂರಿನಲ್ಲಿ ಹೇಳಿದ್ದಾರೆ. ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!