ಕರಾವಳಿ

ಕರಾವಳಿಕ್ರೈಂ

ಬೆಳ್ಳಾರೆ: ಕಳಂಜದ ಮಸೂದ್ ಕೊಲೆ ಪ್ರಕರಣ-ಇಬ್ಬರು ಆರೋಪಿಗಳಿಗೆ ಹೈಕೋರ್ಟ್’ನಿಂದ ಜಾಮೀನು

ಬೆಳ್ಳಾರೆ ಸಮೀಪದ ಕಳಂಜದ ಮಸೂದ್ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ಜೈಲಿನಲ್ಲಿರುವ ಇನ್ನಿಬ್ಬರು ಆರೋಪಿಗಳಿಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಕಳೆದ ವರ್ಷ ಕಳಂಜ ಎಂಬಲ್ಲಿ ನಡೆದಿದ್ದ ಮಸೂದ್

Read More
ಕರಾವಳಿ

ಬಡವರ ಸೇವೆಗೆಂದೇ ರೈ ಚಾರಿಟೇಬಲ್‌ ಟ್ರಸ್ಟ್ ಆರಂಭಿಸಲಾಗಿದೆ: ನಿಹಾಲ್ ಶೆಟ್ಟಿ

ಪುತ್ತೂರು: ಕಳೆದ ಹತ್ತು ವರ್ಷಗಳ ಹಿಂದೆ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟನ್ನು ಸ್ಥಾಪನೆ ಮಾಡಿದ್ದೇ ಬಡವರ ಸೇವೆಗಾಗಿ, ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಅಶೋಕ್ ರೈಯವರು

Read More
ಕರಾವಳಿ

ರಾಜ್ಯಪಾಲರಿಗೆ ಕಂಬಳದ ಆಮಂತ್ರಣ: ಕಂಬಳಕ್ಕೆ ಆಹ್ವಾನ

ಪುತ್ತೂರು: ನ.24,25,26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ರಾಜ್ಯದ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೊಟ್ ರವರಿಗೆ ಕಂಬಳ ಸಮಿತಿ ಅಧ್ಯಕ್ಷರೂ, ಪುತ್ತೂರು ಶಾಸಕರೂ ಆಗಿರುವ

Read More
ಕರಾವಳಿ

ಬೆಳಂದೂರು ಈಡನ್ ಗ್ಲೋಬಲ್ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ-ಕರ್ನಾಟಕ ದರ್ಶನ ಹಸ್ತಪ್ರತಿ ಬಿಡುಗಡೆ

ಪುತ್ತೂರು: ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.  ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಂಝಿ  ಮೊಹಮ್ಮದ್ ಉದ್ಘಾಟಿಸಿದರು. ಅರೇಬಿಕ್ ವಿಭಾಗದ ಮುಖ್ಯಸ್ಥರಾದ ರಶೀದ್ ಸಖಾಫಿ ಕನ್ನಡ  ರಾಜ್ಯೋತ್ಸವದ ಸಂದೇಶವನ್ನು ನೀಡಿದರು.ಆಡಳಿತ ಸಮಿತಿಯವರು ಮಕ್ಕಳಿಗೆ ಶುಭ ಹಾರೈಸಿದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳು,  ಶಿಕ್ಷಕರು ಮತ್ತು ಪೋಷಕರರಿಂದ ರಚಿಸಲ್ಪಟ್ಟ ಕರ್ನಾಟಕ ದರ್ಶನ ಎಂಬ ಸುಮಾರು ಒಂದು ಸಾವಿರ  ಪುಟಗಳನ್ನೊಳಗೊಂಡ ಹಸ್ತ ಪ್ರತಿಯ ಮುಖ ಪುಟವನ್ನು ಬಿಡುಗಡೆ ಮಾಡಲಾಯಿತು. ಇದರಲ್ಲಿ ಕರ್ನಾಟಕದ  ಬಗೆಗಿನ ಲೇಖನಗಳು, ಕಥೆಗಳು, ಕವಿತೆಗಳು, ಸ್ಥಳೀಯ  ಇತಿಹಾಸ, ಭೌಗೋಳಿಕ ಮಾಹಿತಿ, ರಾಜಕೀಯ ಮಾಹಿತಿ, ರೇಖಾಚಿತ್ರಗಳು, ವರ್ಣಚಿತ್ರಗಳು, ಕ್ಯಾಲಿಗ್ರಫಿ ಇತ್ಯಾದಿ  ಒಳಗೊಂಡಿದೆ. ವಿದ್ಯಾರ್ಥಿಗಳಿಂದ ಸುಂದರವಾದ ಮಾನವ ನಿರ್ಮಿತ  ಕರ್ನಾಟಕ ರಾಜ್ಯದ ಆಕರ್ಷಕ ನಕ್ಷೆಯನ್ನು  ಪ್ರದರ್ಶಿಸಲಾಯಿತು. ಕನ್ನಡ ವಿಭಾಗದ ಶಿಕ್ಷಕಿ ಸುಚಿತ್ರಾ .ಎ ಭಾಷೆಯ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ವಿದ್ಯಾರ್ಥಿಗಳಾದ ಮುಹಮ್ಮದ್ ಅಜೀಂ ಭಾಷಣ ಮತ್ತು ಮುಹಮ್ಮದ್ ಶೈಜ್ ಹಾಡಿನ ಮೂಲಕ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ಫಾತಿಮತ್ ಸಹ್ಲಾ ನಿರೂಪಿಸಿದರು. ವಿದ್ಯಾರ್ಥಿ ಮುಹಮ್ಮದ್ ಅಸ್ಲಂ  ಸ್ವಾಗತಿಸಿದರು. ವಿದ್ಯಾರ್ಥಿನಿ ಅಮ್ನ ಫಾತಿಮ ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ ಮತ್ತು  ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

Read More
ಕರಾವಳಿ

ನ.13ರಂದು ರೈ ಚಾರಿಟೇಬಲ್ ಟ್ರಸ್ಟ್’ನಿಂದ ನಡೆಯಲಿರುವ ವಸ್ತ್ರ ವಿತರಣಾ ಕಾರ್ಯಕ್ರಮಕ್ಕೆ ಗ್ರಾಮದ ಕಟ್ಟ ಕಡೆಯ ವ್ಯಕ್ತಿಗೂ ಆಮಂತ್ರಣ: ಸುದೇಶ್ ಶೆಟ್ಟಿ

ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನ.13ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ವಸ್ತ್ರ

Read More
ಕರಾವಳಿ

ಸುಳ್ಯ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸುಳ್ಯ ಪೊಲೀಸ್ ಠಾಣೆಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಸದಾ ಒತ್ತಡದ ಕೆಲಸ ನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಠಾಣೆಯ

Read More
ಕರಾವಳಿ

ಮಾಡನ್ನೂರು ನೂರುಲ್ ಹುದಾಗೆ ಸ್ಪೀಕರ್ ಯು.ಟಿ ಖಾದರ್ ಭೇಟಿ

ಪುತ್ತೂರು: ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರು ಮಾಡನ್ನೂರು ನೂರುಲ್ ಹುದಾ  ಇಸ್ಲಾಮಿಕ್ ಅಕಾಡೆಮಿಯ ವಿದ್ಯಾರ್ಥಿಗಳ ಕಲಾ ಸಾಹಿತ್ಯ ಸ್ಪರ್ಧೆ ‘ನೂರ್ ಶೋ’ದಲ್ಲಿ ಭಾಗವಹಿಸಿ ಸಂಸ್ಥೆಯ ಕಾರ್ಯ ವೈಖರಿ, ಪ್ರಗತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಬುಶ್ರಾ ಅಬ್ದುಲ್ ಅಝೀಝ್ ವಹಿಸಿದ್ದರು.  ಪ್ರಾಂಶುಪಾಲರಾದ ಹನೀಫ್ ಹುದವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಹಮ್ಮದ್ ಬಡಗನ್ನೂರು,  ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಅಬೂಬಕ್ಕರ್  ಮಂಗಳ, ಇಸ್ಮಾಯೀಲ್ ಹಾಜಿ, ಅಬ್ದುಲ್ ಖಾದರ್  ಬಯಂಬಾಡಿ, ಇಬ್ರಾಹಿಂ ಹಾಜಿ ಸಹಿತ ಸಂಸ್ಥೆಯ ಆಡಳಿತ ಸಮಿತಿ ಸದಸ್ಯರು, ಗಣ್ಯರು ಉಲಮಾ, ಉಮರಾ  ನಾಯಕರು ಭಾಗವಹಿಸಿದ್ದರು. ಸಂಸ್ಥೆಯ ವ್ಯವಸ್ಥಾಪಕರಾದ ಖಲೀಲುರ್ರಹ್ಮಾನ್ ಅರ್ಷದಿ ಸ್ವಾಗತಿಸಿದರು.

Read More
ಕರಾವಳಿ

ನ.13ರಂದು ನಡೆಯಲಿರುವ ರೈ ಚಾರಿಟೇಬಲ್ ಟ್ರಸ್ಟ್ ನ ಸಮಾವೇಶಕ್ಕೆ 50 ಸಾವಿರಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ

ಪುತ್ತೂರು: ನವೆಂಬರ್ 13 ರಂದು ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯಲಿರುವ ಟ್ರಸ್ಟಿನ ಮಹಾಸಭೆ ಹಾಗೂ ಟ್ರಸ್ಟಿನ ಫಲಾನುಭವಿಗಳಿಗೆ ವಸ್ತ್ರ ವಿತರಣಾ

Read More
ಕರಾವಳಿ

ಸೊರಕೆ: ಪ್ರತಿಭಾನ್ವಿತ ವಿದ್ಯಾರ್ಥಿ ನಿಧನ

ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸುಪ್ರೀತ್ ಅವರು ನ.1ರಂದು ನಿಧನರಾಗಿದ್ದಾರೆ.ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾದ ಸುಪ್ರೀತ್ ಅವರನ್ನು

Read More
ಕರಾವಳಿ

ಖ್ಯಾತ ಉದ್ಯಮಿ, ಶಿಕ್ಷಣ ಸಂಸ್ಥೆಗಳ ರೂವಾರಿ, ಸಮಾಜ ಸೇವಕ ಕೆ.ಪಿ.ಅಹಮ್ಮದ್ ಹಾಜಿ ಆಕರ್ಷಣ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವ

2023ನೇ ಸಾಲಿನ ದಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಶಿಕ್ಷಣ ಸಂಸ್ಥೆಗಳ ರೂವಾರಿ, ಖ್ಯಾತ ಉದ್ಯಮಿಗಳೂ ಆಗಿರುವ ಕೆ.ಪಿ.ಅಹಮ್ಮದ್ ಹಾಜಿ ಆಕರ್ಷಣ್ ಆಯ್ಕೆಯಾಗಿದ್ದಾರೆ. ಪುತ್ತೂರಿನ ಹಲವಾರು ಸಂಘ

Read More
error: Content is protected !!