ರಾಜಕೀಯ

ರಾಜಕೀಯರಾಜ್ಯರಾಷ್ಟ್ರೀಯ

ಕಾಂಗ್ರೆಸ್ ನಿಂದ ಇನ್ನೊಂದು ಆಫರ್: ರೂ.500ಕ್ಕೆ ಗ್ಯಾಸ್

ಮುಂದಿನ ಕರ್ನಾಟಕ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತೀ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.  ಇದೀಗ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿಯವರು ರೂ.500ಕ್ಕೆ ಗ್ಯಾಸ್ ಸಿಲಿಂಡರ್ ಮತ್ತು ಅಗ್ಗದ ದರಕ್ಕೆ ಪೆಟ್ರೋಲ್, ಡೀಸೆಲ್ ಹಾಗೂ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ. ಬೆಲೆಯೇರಿಕೆಯನ್ನೇ ಪ್ರಮುಖ ವಿಚಾರವನ್ನಾಗಿಸಿಕೊಂಡಿರುವ ಕಾಂಗ್ರೆಸ್ ಜನತೆಗೆ ಆಫರ್‌ಗಳ ಮೇಲೆ ಆಫರ್ ನೀಡುತ್ತಿದ್ದು ಚುನಾವಣೆ ಸಮೀಪಿಸುತ್ತಿರುವ ವೇಳೆ ಇನ್ನಷ್ಟು ಆಫರ್‌ನ್ನು ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಬಿಜೆಪಿ ದುರಾಡಳಿತದಿಂದ ಜನತೆ ಬೇಸತ್ತಿದ್ದು ಕಾಂಗ್ರೆಸ್ ಪಕ್ಷಕ್ಕೆ ಜನತೆ ಆಶೀರ್ವಾದ ಮಾಡುತ್ತಾರೆ ಎನ್ನುವ ವಿಶ್ವಾಸದಿಂದ ಕಾಂಗ್ರೆಸ್ ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಂಡು ಈ ಹಿಂದೆಂದಿಗಿಂತಲೂ ಹೆಚ್ಚು ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸಿರುವ ಹಿನ್ನೆಲೆಯಲ್ಲಿ ಈ ಬಾರಿಯ ಘೋಷಣೆಯನ್ನೂ ಖಂಡಿತಾ ಈಡೇರಿಸುತ್ತಾರೆ, ಅದರಲ್ಲಿ ಅನುಮಾನ ಬೇಡ ಎಂದು ಕಾಂಗ್ರೆಸ್‌ನ ಸ್ಥಳೀಯ ಮಟ್ಟದ ನಾಯಕರು ಹೇಳಿಕೊಂಡಿದ್ದಾರೆ. ಒಟ್ಟಿನಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳು ವಿವಿಧ ಕಸರತ್ತು ನಡೆಸುತ್ತಿದ್ದು ಅಂತಿಮವಾಗಿ ಜನರು ಯಾರಿಗೆ ಆಶೀರ್ವಾದ ಮಾಡುತ್ತಾರೆ ಎಂದುಕಾದು ನೋಡಬೇಕಿದೆ.

Read More
ಕರಾವಳಿರಾಜಕೀಯ

ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ಅಧ್ಯಕ್ಷತೆಯಲ್ಲಿ ಚುನಾವಣಾ ಪೂರ್ವ ಬಾವಿ ಸಭೆಯು ಪಕ್ಷದ

Read More
ರಾಜಕೀಯರಾಷ್ಟ್ರೀಯ

2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಹುಮತ ಕಳೆದುಕೊಳ್ಳಲಿದೆ: ಶಶಿ ತರೂರ್

2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಹುಮತ ಕಳೆದುಕೊಳ್ಳಲಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. ಕೇರಳ ಸಾಹಿತೋತ್ಸವದಲ್ಲಿ ಮಾತನಾಡಿದ ಅವರು, 2019ರ ಗೆಲುವು

Read More
ರಾಜಕೀಯರಾಜ್ಯ

ಸಿದ್ದರಾಮಯ್ಯರಿಗೆ ಸತ್ಯವನ್ನು ಎದುರಿಸುವ ಧೈರ್ಯ ಇಲ್ಲ: ಸಚಿವ ಅಶ್ವತ್ಥನಾರಾಯಣ

‘ಸಿದ್ದು ನಿಜಕನಸು’ ಪುಸ್ತಕ ವೈಯಕ್ತಿಕ ತೇಜೋವಧೆಯ ಪುಸ್ತಕವಲ್ಲ. ರಾಜಕೀಯವಾಗಿ ಸಿದ್ದರಾಮಯ್ಯ ಅವರ ದ್ವಂದ್ವಗಳನ್ನು ಪ್ರಶ್ನಿಸುವ ಪುಸ್ತಕವಾಗಿತ್ತು. ಆ ಪುಸ್ತಕವನ್ನು ಓದದೇ ಸಿದ್ದರಾಮಯ್ಯ ಹೆದರಿ ಓಡಿ ಹೋಗಿ ನ್ಯಾಯಾಲಯದಿಂದ

Read More
ಕರಾವಳಿರಾಜಕೀಯ

ಪುತ್ತೂರು: ಹಿಂದುತ್ವ ಎನ್ನುವುದು ಕುತ್ತಿಗೆಯ ಶಾಲಿನಲ್ಲಿ, ಹಣೆಯ ತಿಲಕದಲ್ಲಿ ಅಲ್ಲ -ಅನಂತ ಕುಮಾರ್ ಹೆಗಡೆ

ಪುತ್ತೂರು: ಹಿಂದುತ್ವ ಎನ್ನುವುದು ಕುತ್ತಿಗೆಯಲ್ಲಿ ಹಾಕುವ ಶಾಲಿನಲ್ಲಿ ಮತ್ತು ಹಣೆಯಲ್ಲಿರುವ ತಿಲಕದಲ್ಲಿ ಕಾಣಬಾರದು. ಬದಲಾಗಿ ನಮ್ಮ ಬದುಕಿನಲ್ಲಿ ಕಾಣಬೇಕು, ನಾಲಿಗೆ, ವಿಚಾರದಲ್ಲಿ ಕಾಣಬೇಕು. ಅದುವೇ ನಿಜವಾದ ಹಿಂದುತ್ವ ಎಂದು ಮಾಜಿ ಸಚಿವ, ಉತ್ತರ ಕನ್ನಡದ ಸಂಸದ ಅನಂತ ಕುಮಾರ್ ಹೆಗಡೆ ಹೇಳಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಜ.12ರಂದು ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  ಒಳಗೊಂದು ಹೊರಗೊಂದು ಹಿಂದುತ್ವ ಇದ್ದರೆ ಅದು ನಿಜವಾದ ಹಿಂದುತ್ವ ಅಲ್ಲ. ಜಾತಿಯ ಗೂಡಿನಿಂದ ಹೊರಬರಲಾಗದವರು ಹಿಂದುತ್ವದ ಬಗ್ಗೆ ಚರ್ಚೆ ಮಾಡುತ್ತಾರೆ. ಹಿಂದುತ್ವ ಎಂದರೆ ಭಾಷಣದ ಸರಕಲ್ಲ, ಅದೊಂದು ಬದುಕು ಎಂದು ಅವರು ಹೇಳಿದರು.  ಹಿಂದುತ್ವ, ಆಡಂಬರವನ್ನು ಒಪ್ಪುವುದಿಲ್ಲ ಎಂದ ಅವರು ಹಿಂದುತ್ವ ಎಂದರೆ ಏನು ಎಂಬುವುದನ್ನು ಮೊದಲು ಅರಿತುಕೊಳ್ಳಬೇಕು ಎಂದು ಹೇಳಿದರು.  ಡಾ. ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಲವಾರು ಮಂದಿ ಉಪಸ್ಥಿತರಿದ್ದರು.

Read More
ರಾಜಕೀಯರಾಜ್ಯರಾಷ್ಟ್ರೀಯ

ಹುಬ್ಬಳ್ಳಿ: ಪೊಲೀಸರ ಸರ್ಪಗಾವಲಿನ ನಡುವೆ ಮೋದಿಯವರತ್ತ ನುಗ್ಗಿದ ಬಾಲಕ..!

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನಗರದಲ್ಲಿ ನಡೆಸುತ್ತಿದ್ದ ರೋಡ್ ಶೋ ವೇಳೆ ಭದ್ರತಾ ಲೋಪ ಉಂಟಾಗಿದೆ. ಬಾಲಕನೊಬ್ಬ ಏಕಾಏಕಿ ಮೋದಿ ಕಾರಿನತ್ತ ನುಗ್ಗಿ

Read More
ರಾಜಕೀಯರಾಜ್ಯರಾಷ್ಟ್ರೀಯ

ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ಮೋದಿ

ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದರು. ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 3.30ಕ್ಕೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ

Read More
ಕರಾವಳಿರಾಜಕೀಯ

ಅಶೋಕ್ ಕುಮಾರ್ ರೈ ಉಜ್ವಲ ರಾಜಕೀಯ ಭವಿಷ್ಯಕ್ಕೆ ಅಭಿಮಾನಿಗಳಿಂದ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು: ಕೋಡಿಂಬಾಡಿ ರೈ ಎಸ್ಟೇಟ್‌ನ ಮಾಲಕರು, ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್‌ನ ಮುಖ್ಯ ಪ್ರವರ್ತಕರೂ ಆಗಿರುವ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಗೆ ರಾಜಕೀಯ ಶಕ್ತಿ ಮತ್ತು ಸ್ಥಾನಮಾನ ಸಿಗಲಿ ಎಂದು ಪ್ರಾರ್ಥಿಸಿ ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅಶೋಕ್ ಕುಮಾರ್ ರೈ ಅಭಿಮಾನಿಗಳು ಮತ್ತು ಹಿತೈಷಿಗಳಿಂದ ವಿಶೇಷ ರಂಗ ಪೂಜೆ ನಡೆಯಿತು. ಹಲವಾರು ಮಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಿಜೆಪಿ ದ.ಕ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿರುವ ಅಶೋಕ್ ಕುಮಾರ್ ರೈ ಅವರು ಮುಂದಿನ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸುವುದು ಖಚಿತ ಎನ್ನಲಾಗುತ್ತಿದೆಯಾದರೂ ಅಧಿಕೃತ ಆಗಿಲ್ಲ. ಅಶೋಕ್ ಕುಮಾರ್ ರೈ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದು ಸಮಾಜ ಸೇವೆಯ ಮೂಲಕ ಚಿರಪರಿಚಿತರಾಗಿದ್ದಾರೆ.

Read More
ರಾಜಕೀಯರಾಜ್ಯ

ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದ ಕಾಂಗ್ರೆಸ್: ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್-ಡಿಕೆಶಿ

ಮುಂಬರುವ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.

Read More
ರಾಜಕೀಯರಾಜ್ಯರಾಷ್ಟ್ರೀಯ

ಜ.12: ಪ್ರಧಾನಿ ಮೋದಿ ಹುಬ್ಬಳ್ಳಿಗೆ

ಪ್ರಧಾನಿ ನರೇಂದ್ರ ಮೋದಿಯವರು ಜ.12ರ ಮಧ್ಯಾಹ್ನ ಹುಬ್ಬಳ್ಳಿ ನಗರಕ್ಕೆ ಆಗಮಿಸಲಿದ್ದು, ‘ರಾಷ್ಟ್ರೀಯ ಯುವಜನೋತ್ಸವ’ದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ

Read More
error: Content is protected !!