ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್
ಮೈಸೂರು: ನರಸಿಂಹರಾಜ ಕ್ಷೇತ್ರದ ಹಾಲಿ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಅವರು ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ರಾಜೀನಾಮೆ ಸುದ್ದಿ ಪ್ರಚಾರ ಆಗುತ್ತಿದ್ದಂತೆ ಅವರ ನಿವಾಸದ
Read Moreಮೈಸೂರು: ನರಸಿಂಹರಾಜ ಕ್ಷೇತ್ರದ ಹಾಲಿ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಅವರು ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ರಾಜೀನಾಮೆ ಸುದ್ದಿ ಪ್ರಚಾರ ಆಗುತ್ತಿದ್ದಂತೆ ಅವರ ನಿವಾಸದ
Read Moreಹತ್ಯೆ ಮಾಡಲು ಕರೆ ನೀಡುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ರಾಜ್ಯಪಾಲರು ತಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು
Read Moreಮಂಡ್ಯ: ‘ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಕರೆ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಮಂಡ್ಯ
Read Moreಬೆಂಗಳೂರು: ಫೆ.14ರಂದು ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಹಿರಿಯ ಸದಸ್ಯ ಬಿ.ಎಂ ಫಾರೂಕ್ ರವರು ಚುಕ್ಕೆ ಗುರುತಿನ ಪ್ರಶ್ನೆ ಮೂಲಕ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಲ್ಲೂರ್
Read Moreಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯಕರ್ತರ ಸಭೆ ಪುತ್ತೂರಿನ ಎಂ.ಡಿ.ಎಸ್ ಟ್ರಿನಿಟಿ ಹಾಲ್ ನಲ್ಲಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ
Read Moreಬೆಂಗಳೂರು: ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊರ್ವರ ಕಾಟಕ್ಕೆ ಬೇಸತ್ತು ದಂತ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯ್ ನಗರದಲ್ಲಿ ನಡೆದಿದೆ. ಉತ್ತರಪ್ರದೇಶದ ಲಕ್ನೋ ಮೂಲದ ದಂತ ವ್ಯೆದ್ಯೆ
Read Moreಗ್ರಾಮೀಣ ಜನರಿಗೆ ಉದ್ಯೋಗದ ಖಾತ್ರಿ ನೀಡುವ ಗ್ರಾ. ಪಂ ವ್ಯಾಪ್ತಿಯಲ್ಲಿ ವಿಶೇಷ ಅಭಿವೃದ್ಧಿಗೆ ಕಾರಣವಾಗಿರುವ ಮಹತ್ವದ ‘ನರೇಗಾ‘ ಯೋಜನೆಗೆ 2023–24ರ ಬಜೆಟ್‌ನಲ್ಲಿ ಅನುದಾನ ಕಡಿತವಾಗಿದೆ. ನರೇಗಾ ಯೋಜನೆಗೆ
Read Moreಕೇಂದ್ರ ಗೃಹ ಸಚಿವ, ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಫೆ.11ರಂದು ಪುತ್ತೂರಿಗೆ ಆಗಮಿಸಲಿದ್ದಾರೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ತೆಂಕಿಲ
Read Moreಪುತ್ತೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಕಲ್ಲೇಗ ಅವರು ಸ್ಪರ್ಧಿಸುವುದು ಬಹುತೇಕ ಖಚಿತ ಎನ್ನುವ ಮಾಹಿತಿ ಲಭ್ಯವಾಗಿದೆ. ಅಶ್ರಫ್ ಕಲ್ಲೇಗ ಆವರು ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಕಳೆದ ಐದು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು ಅವರನ್ನೇ ಈ ಬಾರಿಯ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿಸಲು ಜೆಡಿಎಸ್ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಜ.30ರಂದು ಪುತ್ತೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲೂ ಅಶ್ರಫ್ ಕಲ್ಲೇಗ ಪರವಾಗಿ ಕಾರ್ಯಕರ್ತರು ಬ್ಯಾಟ್ ಬೀಸಿದ್ದು ಜೆಡಿಎಸ್ ದ.ಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಅವರಲ್ಲೂ ಅಶ್ರಫ್ ಕಲ್ಲೇಗರಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಮನವಿ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಅಶ್ರಫ್ ಕಲ್ಲೇಗ ಅವರು ಈ ಹಿಂದೆಯೇ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದು ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಬೇರೆಯವರಿಗೆ ಟಿಕೆಟ್ ಸಿಕ್ಕಿದರೂ ಮುನಿಸಿಕೊಳ್ಳದ ಅಶ್ರಫ್ ಕಲ್ಲೇಗ ಅವರು ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದರು. ಮಾತ್ರವಲ್ಲದೇ ಯಾವುದೇ ಸಂದರ್ಭದಲ್ಲೂ ಪಕ್ಷ ವಿರೋಧಿ ಚಟುವಟಿಕೆ ನಡೆಸದೆ ಕ್ಲೀನ್ ಇಮೇನ್ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ಈ ಬಾರಿ ಟಿಕೆಟ್ ಖಚಿತ ಎನ್ನುವ ಮಾತುಗಳು ಬಲವಾಗಿ ಕೇಳಿ ಬಂದಿದೆ. ಜೆಡಿಎಸ್ ಅಭ್ಯರ್ಥಿ ಸ್ಥಾನಕ್ಕೆ ಅಶ್ರಫ್ ಕಲ್ಲೇಗ ಮಾತ್ರವಲ್ಲದೇ ಪಕ್ಷದ ಪ್ರಮುಖರಾದ ಮೀರಾ ಸಾಹೇಬ್ ಕಡಬ, ಐ.ಸಿ ಕೈಲಾಸ್, ಇಬ್ರಾಹಿಂ ಗೋಳಿಕಟ್ಟೆ ಅವರ ಹೆಸರೂ ಕೇಳಿ ಬರುತ್ತಿದೆ. ಆದರೆ ಯಾವುದೂ ಅಂತಿಮವಾಗಿಲ್ಲ.
Read Moreಬೆಳ್ತಂಗಡಿ: ಇನ್ಸ್ಟಾಗ್ರಾಮ್ ನಲ್ಲಿ ಪರಿಚಿತರಾಗಿದ್ದ ವ್ಯಕ್ತಿಯೋರ್ವರು ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಹಾಕಿರುವ ಹಿನ್ನೆಲೆಯಲ್ಲಿ ಹೆದರಿ ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19.ವ) ಮೃತ ವಿದ್ಯಾರ್ಥಿ. ಬೆಳ್ತಂಗಡಿ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹರ್ಷಿತ್ ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಕೆಲವು ದಿನಗಳ ಹಿಂದೆ ಓರ್ವ ಅಪರಿಚಿತ ವ್ಯಕ್ತಿಯು ಸಂಪರ್ಕಕ್ಕೆ ಸಾಧಿಸಿದ್ದು ಆ ನಂತರ ಹರ್ಷಿತ್ ಆತನೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಚಾಟಿಂಗ್ ಮಾಡಿಕೊಂಡಿದ್ದ ಎನ್ನಲಾಗಿದೆ. ಆ ಬಳಿಕ ಅಪರಿಚಿತ ವ್ಯಕ್ತಿಯು ಮೊಬೈಲ್‌ಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದು ನಿಮ್ಮ ವೈಯಕ್ತಿಕ ವಿಡಿಯೋ ನನ್ನ ಬಳಿ ಇದೆ. ಅದನ್ನು ನಾನು ಸಾರ್ವಜನಿಕವಾಗಿ ವೈರಲ್ ಮಾಡುತ್ತೇನೆ. ವೈರಲ್ ಮಾಡಬಾರದು ಎಂದಾದರೆ ತನಗೆ ಹಣ ಕೊಡಬೇಕೆಂದು ಬೇಡಿಕೆ ಇಟ್ಟಿದ್ದನು. ಇದಕ್ಕೆ ಹರ್ಷಿತ್ ಕೆಲ ದಿನಗಳ ಸಮಯಾವಕಾಶ ನೀಡುವಂತೆ ಕೇಳಿದ್ದರು. ಆದರೆ ಸಮಯಾವಕಾಶದ ವರೆಗೂ ಹಣ ಹೊಂದಿಸಲು ಸಾಧ್ಯವಾಗದ ಹರ್ಷಿತ್ ತನ್ನ ಮಾನ ಹೋಗಬಹುದೆಂದು ಹೆದರಿ ಇಲಿ ಪಾಷಾನ ಸೇವಿಸಿದ್ದು ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ.29ರಂದು ಅವರು ಕೊನೆಯುಸಿರೆಳೆದಿದ್ದಾರೆ.
Read More