ರಾಜ್ಯ

ಕರಾವಳಿರಾಜಕೀಯರಾಜ್ಯ

ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಶಾಬು ಸಾಹೇಬ್ ಪಾಲ್ತಾಡ್ ನೇಮಕ

ಪುತ್ತೂರು: ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಪಿ ಶಾಬು ಸಾಹೇಬ್ ಪಾಲ್ತಾಡ್ ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರ ಆದೇಶದ ಮೇರೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್, ಸ್ಪೀಕರ್ ಯು.ಟಿ ಖಾದರ್, ಮಾಜಿ ಸಚಿವ ರಮಾನಾಥ ರೈ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮೊದಲಾದವರ ಶಿಫಾರಸ್ಸಿನ ಮೇರೆಗೆ  ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಪುಟ್ಟಸ್ವಾಮಿ ಗೌಡರವರು ಪಿ ಶಾಬು ಸಾಹೇಬ್ ಪಾಲ್ತಾಡ್ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ  ನೇಮಕ ಮಾಡಿದ್ದಾರೆ. ಶಾಬು ಸಾಹೇಬ್‌ರವರು ಕಳೆದ 45 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಧ್ಯಾಕ್ಷರಾಗಿ, ಕೆ.ಪಿ.ಸಿ.ಸಿ ಸೇವಾದಳದ ಸದಸ್ಯರಾಗಿ, ಕೆ.ಪಿ.ಸಿ.ಸಿ ಅಲ್ಪಸಂಖ್ಯಾತರ ಕೋ-ಆರ್ಡಿನೇಟರ್ ಆಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲೂ ಸಕ್ರಿಯರಾಗಿರುವ ಶಾಬು ಸಾಹೇಬ್‌ರವರು ಸಂಗ ಸಂಸ್ಥೆಗಳಲ್ಲೂ ತೊಡಗಿಸಿಕೊಂಡಿದ್ದರು. 

Read More
ರಾಜ್ಯ

ಕೆಂಪೇ ಗೌಡ ವಿಮಾನ ನಿಲ್ದಾಣಕ್ಕೆ ಕರವೇ ಕಾರ್ಯಕರ್ತರ ಮುತ್ತಿಗೆ

ಕಾವೇರಿ ನೀರು ತಮಿಳುನಾಡಿಗೆ ಹರಿಸುವ ವಿಚಾರದಲ್ಲಿ ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ

Read More
ರಾಜಕೀಯರಾಜ್ಯ

ಮತದಾರರಿಗೆ ಐರನ್ ಬಾಕ್ಸ್, ಕುಕ್ಕರ್ ಹಂಚಿದ ಆರೋಪ- ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಸಮುದಾಯವೊಂದಕ್ಕೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಆರೋಪಿಸಿ ಮೈಸೂರು ಬಿಜೆಪಿ ಘಟಕದಿಂದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಗೆ ದೂರು

Read More
ಕ್ರೈಂರಾಜ್ಯ

ಬೆಂಗಳೂರು: ಆಂಟಿ ಎಂದು ಕರೆದಿದ್ದಕ್ಕೆ ಆಕ್ರೋಶಗೊಂಡು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಮಹಿಳೆ

ಬೆಂಗಳೂರು: ಮಹಿಳೆಯೊಬ್ಬರನ್ನು ಆಂಟಿ ಎಂದು ಕರೆದಿದ್ದಕ್ಕೆ ಆಕ್ರೋಶಗೊಂಡು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರು ಬೆಂಗಳೂರಿನಲ್ಲಿ ವರದಿಯಾಗಿದೆ. ಹಲ್ಲೆಗೊಳಗಾದ ವ್ಯಕ್ತಿ ಪೊಲೀಸ್ ದೂರು ನೀಡಿದ್ದಾರೆ. ಮಲ್ಲೇಶ್ವರಂ ಠಾಣಾ

Read More
ರಾಜಕೀಯರಾಜ್ಯರಾಷ್ಟ್ರೀಯ

ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಅವರೆಲ್ಲಿದ್ದಾರೆ?- ಜೆಡಿಎಸ್ ಕಾಲೆಳೆದ ಕಾಂಗ್ರೆಸ್

ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ನಡೆಸಿ ಒಮ್ಮತಕ್ಕೆ ಬಂದಿದ್ದು ಬಿಜೆಪಿ ನಾಯಕರಾದ ಅಮಿತ್ ಶಾ, ಜೆಪಿ ನಡ್ಡಾ ಜೊತೆಗಿನ

Read More
ಕರಾವಳಿರಾಜ್ಯ

ಬೆಂಗಳೂರು ಕಂಬಳ: ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸಭೆ

ಪುತ್ತೂರು: ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ವಿಚಾರಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರಮುಖರ ಜೊತೆ ಶಾಸಕರಾದ ಅಶೋಕ್ ರೈಯವರು ಬೆಂಗಳೂರಿನ ಸ್ವಾತಿ ಹೊಟೇಲ್ ಸಭಾಂಗಣದಲ್ಲಿ ಸಭೆ

Read More
ರಾಜ್ಯ

ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಖಚಿತ

ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದು ಖಚಿತವಾಗಿದೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಹೊಸದಿಲ್ಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಗೃಹ

Read More
ಕ್ರೈಂಜಿಲ್ಲೆರಾಜ್ಯ

ಚೈತ್ರಾ ಕುಂದಾಪುರ & ಟೀಂ ವಂಚನೆ ಪ್ರಕರಣ: ಹಾಲಶ್ರೀ ಸ್ವಾಮಿ ಸೆ.29ರವರೆಗೆ ಸಿಸಿಬಿ ವಶಕ್ಕೆ

ಬೆಂಗಳೂರು: ಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮೂರನೇ ಆರೋಪಿ ಹಾಲಶ್ರೀ ಸ್ವಾಮಿ

Read More
ಕ್ರೈಂಜಿಲ್ಲೆರಾಜ್ಯ

ಹಾಲಶ್ರೀ ಸಿಕ್ಕಿ ಬಿದ್ದದ್ದು ಹೇಗೆ? ಎಲ್ಲಿಂದ ಎಲ್ಲಿಗೆ ಹೋಗಿದ್ದು ಗೊತ್ತಾ?

ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮೂರನೇ ಆರೋಪಿಯಾಗಿರುವ ಹಾಲಾಶ್ರೀ ಸ್ವಾಮಿ ಕೊನೆಗೂ ಸಿಕ್ಕಿ ಬಿದ್ದಿದ್ದು ಕರ್ನಾಟಕದ ಮೈಸೂರಿಗೆ ಹೋಗಿದ್ದ ಸ್ವಾಮೀಜಿ ಅಲ್ಲಿಂದ ಕಾರಿನಲ್ಲಿ ಆಂಧ್ರಪ್ರದೇಶಕ್ಕೆ ತೆರಳಿದ್ದರು.

Read More
ಕರಾವಳಿರಾಜಕೀಯರಾಜ್ಯ

ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಬೆಳೆ ವಿಮೆ ಅವಧಿ ವಿಸ್ತರಣೆಗೆ ಶಾಸಕ ಅಶೋಕ್ ರೈಯವರಿಂದ ಮುಖ್ಯಮಂತ್ರಿಗೆ ಮನವಿ

ಪುತ್ತೂರು: ರೇಶನ್ ಕಾರ್ಡು ತಿದ್ದುಪಡಿ ಹಾಗೂ ಬೆಳೆ ಸಮೀಕ್ಷೆ ಅವಧಿಯನ್ನು ವಿಸ್ತರಣೆ ಮಾಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ವಿದೇಶ ಪ್ರವಾಸದಲ್ಲಿರುವ ಶಾಸಕರು ದೂರವಾಣಿ ಮೂಲಕ ಮುಖ್ಯಮಂತ್ರಿಯವರನ್ನು ಸಂಪರ್ಕಿಸಿ ರೇಶನ್ ಕಾರ್ಡು ತಿದ್ದುಪಡಿಗೆ ನೀಡಿರುವ ಅವಧಿ ಈಗಾಗಲೇ ಮುಕ್ತಾಯಗೊಂಡಿದ್ದು ಕೊನೇ ದಿನಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ತಿದ್ದುಪಡಿ ಮಾಡಿಸಿಕೊಳ್ಳಲು ಹೆಚ್ಚಿನವರಿಗೆ ಸಾಧ್ಯವಾಗಿಲ್ಲ. ಹಲವಾರು ಮಂದಿಯ ರೇಶನ್ ಕಾರ್ಡುಗಳ ತಿದ್ದುಪಡಿ ಬಾಕಿ ಇದ್ದು ತಿದ್ದುಪಡಿ ಅವಧಿ ಮುಗಿದಿರುವ ಸಮಯವನ್ನು ವಿಸ್ತರಣೆ ಮಾಡುವಂತೆ ಸಿಎಂ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಬೆಳೆ ಸಮೀಕ್ಷೆ ವಿಸ್ತರಣೆಗೂ ಮನವಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳೆ ಸಮೀಕ್ಷೆಯ ಅವಧಿ ಮುಗಿದಿದ್ದು ಅದನ್ನು ವಿಸ್ತರಣೆ ಮಾಡುವಂತೆಯೂ ಸೀಎಂ ಅವರಲ್ಲಿ ಶಾಸಕರು ಮನವಿ ಮಾಡಿದ್ದಾರೆ. ಬೆಳೆ ವಿಮೆಗಾಗಿ ಈಗಾಗಲೇ ಬೆಳೆ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು ಅದರ ಅವಧಿ ಸೆ.15 ರಂದು ಕೊನೆಗೊಂಡಿರುತ್ತದೆ. ಬೆಳೆ ಸಮೀಕ್ಷೆ ಇನ್ನೂ ಬಾಕಿ ಇದ್ದು ಕೃಷಿಕರಿಗೆ ಪ್ರಯೋಜನವಾಗುವ ರೀತಿಯಲ್ಲಿ ಅದರ ಅವಧಿಯನ್ನು ವಿಸ್ತರಣೆ ಮಾಡುವಂತೆಯೂ ಶಾಸಕರು ಮನವಿ ಮಾಡಿದ್ದಾರೆ. ಸ್ಪಂದನೆ: ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಮತ್ರಿಗಳು ಈ ಬಗ್ಗೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

Read More
error: Content is protected !!